ಪುತ್ತೂರು: ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಸಮಿತಿಯ ವಿಶೇಷ ಸಾಮಾನ್ಯ ಸಭೆಯಲ್ಲಿ ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು.
ಪ್ರತಿಷ್ಠಿತ ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಅವರು ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲುಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಯ ಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸಹೋದರ.
ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಗುಣರಂಜನ್ ಅವರು ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಬೆಂಗಳೂರು, ಐ ಕ್ಯಾರ್ ಬ್ರಿಗೇಡ್, ಐ ಕ್ಯಾರ್ ಫೌಂಡೇಶನ್, ಜಯಕರ್ನಾಟಕ ಜನಪರ ವೇದಿಕೆಯ ಸ್ಥಾಪಕಾಧ್ಯಕ್ಷರೂ ಆಗಿದ್ದು ಇತ್ತೀಚೆಗೆ ರಾಜ್ಯ ರಾಜಧಾನಿಯಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಸೃಷ್ಟಿಸಿರುವ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.