ಮಂಗಳೂರು: ಯೇಸು ಕ್ರಿಸ್ತರ ಪುನರುತ್ಥಾನದ ಸ್ಮರಣೆಯ ಈಸ್ಟರ್ ಹಬ್ಬವನ್ನು ಕರಾವಳಿಯ ಕ್ರೈಸ್ತರು ರವಿವಾರ ಸಡಗರ-ಸಂಭ್ರಮದಿಂದ ಆಚರಿಸುತ್ತಾರೆ. ಇದರ ಅಂಗವಾಗಿ ಶನಿವಾರ ರಾತ್ರಿ ಚರ್ಚ್‌ಗಳಲ್ಲಿ ನಡೆದ ಬಲಿಪೂಜೆಯಲ್ಲಿ ಕ್ರೈಸ್ತರು ಭಕ್ತಿ, ಶ್ರದ್ಧೆಯಿಂದ ಭಾಗವಹಿಸಿದರು.
ಕರಾವಳಿಯ ವಿವಿಧ ಚರ್ಚ್‌ಗಳಲ್ಲಿ ಶನಿವಾರ ಸಂಜೆಯ ವೇಳೆ ಜಗತ್ತಿಗೆ ಬೆಳಕಾದ ಕ್ರಿಸ್ತರ ಬೆಳಕು ಆಶೀರ್ವಚನ ಹಾಗೂ ಪವಿತ್ರ ಸಂಸ್ಕಾರಕ್ಕೆ ಬಳಸುವ ಪವಿತ್ರ ಜಲದ ಆಶೀರ್ವಾದ ನೆರವೇರಿತು. ಧರ್ಮಪ್ರಾಂತ್ಯದ ಎಲ್ಲಾ ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಈಸ್ಟರ್ ಜಾಗರಣೆ ಬಲಿಪೂಜೆಯು ಭಕ್ತಿ, ಶ್ರದ್ಧೆಯಿಂದ ಜರಗಿತು.