ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ಅವರು ತಿಳಿಸಿದರು.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಎ. 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಯು ಅಳಕೆ, ನ್ಯೂಚಿತ್ರಾ ಟಾಕೀಸ್, ಉಷಾ ಕಿರಣ್ ಹೋಟೆಲ್ (ಎಡ),ಟೆಂಪಲ್ ಸ್ಕ್ವಾರ್, ಜಿಎಚ್ಎಸ್ ರೋಡ್(ಬಲ), ಗಣಪತಿ ಹೈಸ್ಕೂಲ್ ರಸ್ತೆ, ಓಲ್ಡ್ ಐಡಿಯಲ್ ಪಾರ್ಲರ್, ಮಂಗಳೂರು ವಿವಿ ಕಾಲೇಜು ರೋಡ್, ಕ್ಲಾಕ್ ಟವರ್, ಟೌನ್ ಹಾಲ್ ರಸ್ತೆಯ ಮೂಲಕ ಆಗಮಿಸಿ ಎ.ಬಿ.ಶೆಟ್ಟಿ ಸರ್ಕಲ್ ಬಳಿ ಸಮಾವೇಶಗೊಳ್ಳಲಿದೆ. ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಸುವ ವೇಳೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಪಾಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ ಮತ್ತು ಮಹಾಬಲ ಮಾರ್ಲ, ಇಬ್ರಾಹೀಂ ಕೊಡಿಜಾಲ್, ಮಿಥುನ್ ರೈ, ನವೀನ್ ಡಿ’ಸೋಜ, ಬಿ ಎಲ್ ಪಿ ಪದ್ಮನಾಭ, ಅಶೋಕ್ ಡಿ ಕೆ, ರಮಾನಂದ ಪೂಜಾರಿ, ಟಿ ಕೆ ಸುಧೀರ್, ಜಯಶೀಲಾ ಅಡ್ಯಂತಾಯ, ನಝೀರ್ ಬಜಾಲ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.