ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಬಿಜೆಪಿ ವಕ್ತಾರೆ ಗೀತಾಂಜಲಿ ಸುವರ್ಣ

Share with

ಉಡುಪಿ: ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ. ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಸಚಿವ ಪ್ರಿಯಾಂಕ್ ಖರ್ಗೆಯವರು ಹಿಂದೆಯೂ ಮಹಿಳೆಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದಿದ್ದರು. ಈ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಇದೀಗ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುವ ಕಾರ್ಯಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಕೈ ಹಾಕಿದೆ. ಇಂತಹ ಅವಮಾನಕ್ಕೆ ಮಹಿಳೆಯರು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಮೂಲಕ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ ಕಾಂಗ್ರೆಸ್ ಸರಕಾರ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುತ್ತಿದೆ. ಪರೀಕ್ಷೆಗೆ ಬಂದ ಹಿಂದೂ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುತ್ತಾರೆ. ಹಿಂದುತ್ವ, ಹಿಂದೂ ಸಂಸ್ಕೃತಿಗೆ ಈ ಸರಕಾರ ಬೆಲೆ ಕೊಡುತ್ತಿಲ್ಲ. ಹಿಂದೂ ಮಹಿಳೆಯರ ಮಾಂಗಲ್ಯ ತೆಗೆಸುವ ದುಸ್ಸಾಹಸದಿಂದ ಈ ಸರಕಾರದ ಮನಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ಕಿಡಿಕಾರಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *