ಮಂಗಳೂರು: ನಾಮಪತ್ರ ಸಲ್ಲಿಸಿದ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

Share with

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್.4ರಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್ ಚೌಟ ಅವರು ಆಗಮಿಸಿದರು. ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *