ಉಡುಪಿ: ರಸ್ತೆ ಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು

Share with

ಉಡುಪಿ: ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ಮಧ್ಯೆ ಕುಸಿದುಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಬಲಾಯಿಪಾದೆ ನಿವಾಸಿ ಗಣೇಶ್ ದೇವಾಡಿಗ (55) ಎಂದು ಗುರುತಿಸಲಾಗಿದೆ.

ರಸ್ತೆ ಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು

ಇವರು ಉಡುಪಿಯಿಂದ ಬಲಾಯಿಪಾದೆಯಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದಾಗ ರಸ್ತೆ ಮಧ್ಯೆ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ನಗರಸಭೆ ಸದಸ್ಯ ವಿಜಯ ಪೂಜಾರಿ ಅವರ ಸಹಕಾರದೊಂದಿಗೆ ಗಣೇಶ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆತಂದರು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ್ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *