ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಏಪ್ರಿಲ್ 9ರಂದು ರಾಯಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಾಗೂ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಶರತ್ ಕುಮಾರ್ ಕೊಯಿಲ ಅವರ ಮನೆಯಲ್ಲಿ ಚಾಲನೆ ನೀಡಿದರು.
ಅವರು ರಾಯಿ ಗ್ರಾಮದಲ್ಲಿ ಮತದಾರರನ್ನು ಭೇಟಿ ಮಾಡಿ, ಕೆಲವೊಂದು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರಿಚಯ ಪತ್ರ, ಹಾಗೂ ಕೇಂದ್ರ ಸರಕಾರದ ಅಧಿಕಾರದ ಅವಧಿಯಲ್ಲಿ ಮಾಡಿದ ಸಾಧನೆ ಮತ್ತು ಯೋಜನೆಗಳ ಮಾಹಿತಿ ಪತ್ರವನ್ನು ಮತದಾರರಿಗೆ ನೀಡಿದರು. ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬ್ರಿಜೇಶ್ ಚೌಟ ಅವರನ್ನು ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಡುವಂತೆ ಮತದಾರರ ಲ್ಲಿ ಮನವಿ ಮಾಡಿದರು.
ಬಿಜೆಪಿಯ ಕನಸಾಗಿದ್ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಆರ್ಟಿಕಲ್ಸ್ 370 ರದ್ದು ಹೀಗೆ ಬಿಜೆಪಿ ನೀಡಿರುವ ಭರವಸೆಯನ್ನು ಮೋದಿಜಿಯವರು ನೆರವೇರಿಸಿದ್ದಾರೆ ಎಂದು ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್.14ರಂದು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವ
ನಿಟ್ಟಿನಲ್ಲಿ ಮಂಗಳೂರಿಗೆ ಆಗಮಿಸಿಲಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಹಿಂದುತ್ವ ಮತ್ತು ಮೋದಿಯವರ ಅಭಿವೃದ್ಧಿ ಚಿಂತನೆಯ ಮೇಲೆ ಈ ಬಾರಿ ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಲಿದ್ದಾರೆ. ಆದರೆ ಕೆಲವೊಂದು ಪ್ರಮುಖ ನಿರ್ಧಾರವನ್ನು ಕೈಗೊಳ್ಳುವ ದೃಷ್ಟಿಯಿಂದ 400ಕ್ಕೂ ಅಧಿಕ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂಬ ಮೋದಿಯವರ ಕಲ್ಪನೆ ಸಾಕಾರಗೊಳ್ಳಲು ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ತಿಳಿಸಿದರು.
ರಾಯಿ ಗ್ರಾಮಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷೆ ಗುಣಾವತಿ, ಸದಸ್ಯರಾದ ಸಂತೋಷ್ ಗೌಡ, ಉಷಾಸಂತೋಷ್, ಪ್ರಮುಖರಾದ ಹರೀಶ್ ಆಚಾರ್ಯ ರಾಯಿ,ಮಧುಕರ ಬಂಗೇರ, ವಸಂತ ಗೌಡ ಮುದ್ದಾಜೆ, ಚಂದ್ರಶೇಖರ್ ಗೌಡ ಕಾರಂಬಡೆ, ಶಿವಪ್ರಸಾದ್, ನವೀನ್ ಸಾಲ್ಕೋಡಿ, ಚೇತನ್ ಕೊಯಿಲ, ದಿನೇಶ್ ಸುವರ್ಣ ರಾಯಿ ಮತ್ತಿತರರು ಹಾಜರಿದ್ದರು.