ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ; ಉಡುಪಿ ದ್ವಿತೀಯ ಸ್ಥಾನ

Share with

Second PU Result Declared

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.

ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 
11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.


Share with

Leave a Reply

Your email address will not be published. Required fields are marked *