‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಟ್’ ಅಭಿಯಾನ

Share with

ಉಡುಪಿ: ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಯೋಚನೆ-ಯೋಜನೆಗಳಿಂದ ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು, ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ತಿಳಿಸಿದರು.
ಬಿಜೆಪಿ ಉಡುಪಿ ಜಿಲ್ಲಾ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ಇದೇ ಬರುವ ಎ. 14ರ ಯುಗಾದಿಯ ಶುಭದಿನದಂದು ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಅಭಿಯಾನ ಆರಂಭಗೊಳ್ಳಲಿದೆ. ಈ ಅಭಿಯಾನದ ಮೂಲಕ ಮಹಿಳಾ ಕಾರ್ಯಕರ್ತರು ಮನೆ ಮನೆ ಸಂಪರ್ಕ ನಡೆಸಿ ಮೋದಿ ಸರಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮಹಿಳಾ ಮತದಾರರಿಗೆ ಮನವರಿಕೆ ಮಾಡಲಿದ್ದಾರೆ ಎಂದರು.
ಜಿಲ್ಲೆಯಾದ್ಯಂತ ಪ್ರತಿ ಬೂತ್ ಗಳಲ್ಲಿ ‘ಶಕ್ತಿ ಚೌಪಾಲ್’ ಅಭಿಯಾನದಡಿ ಮಹಿಳೆಯರ ಕಾರ್ನರ್ ಸಭೆಗಳು ಈಗಾಗಲೇ ಆರಂಭಗೊಂಡಿದ್ದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ 1,112 ಬೂತ್ ಗಳಲ್ಲಿ ಸುಮಾರು 3,500 ಕಾರ್ನರ್ ಸಭೆಗಳು ನಡೆಯಲಿವೆ. ಮಂಡಲ ಶಹ ಮಹಿಳಾ ಸಮಾವೇಶಗಳು ಏ.18 ಮತ್ತು 19ರಂದು ನಡೆಯಲಿವೆ ಎಂದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1,31,430 ಮಂದಿ ಮಹಿಳೆಯರು ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆದಿದ್ದಾರೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ 1,73,387 ಮಂದಿ ಫಲಾನುಭವಿಗಳಿದ್ದು, ಜಲ್ ಜೀವನ್ ಮಿಷನ್ ಯೋಜನೆಯಡಿ 3,61,476 ಮಂದಿ ಶುದ್ಧ ಕುಡಿಯುವ ನೀರಿನ ಸಂಪರ್ಕವನ್ನು ಹೊಂದಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 52,201 ಮನೆಗಳು ನಿರ್ಮಾಣಗೊಂಡಿವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 12,02,000 ಮಂದಿ ಫಲಾನುಭವಿಗಳು ಉಚಿತ ಅಕ್ಕಿಯನ್ನು ಪಡೆಯುತ್ತಿದ್ದು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸುಮಾರು 80,984 ಶೌಚಾಲಯಗಳು ನಿರ್ಮಾಣಗೊಂಡಿವೆ. 2024ರ ವರೆಗೆ ಕ್ಷೇತ್ರದಾದ್ಯoತ ಒಟ್ಟು 7,74,231 ಎಲ್ಇಡಿ ಬಲ್ಬ್ ಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದೆ ಸಂಪೂರ್ಣವಾಗಿ ದೇಶದ ಹಿತಕ್ಕಾಗಿ ತನ್ನನ್ನು ಮುಡಿಪಾಗಿಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಕಣ್ಮಣಿಯಾಗಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಸಂಕಲ್ಪದೊಂದಿಗೆ ಜಿಲ್ಲೆಯ ನಾರೀ ಶಕ್ತಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಅಂತರದ ಮತಗಳಿಂದ ಗೆಲ್ಲಿಸುವ ಪಣತೊಟ್ಟು ಬದ್ಧತೆಯಿಂದ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ರೇಷ್ಮಾ ಉದಯ್ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಪ್ರಿಯದರ್ಶಿನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *