ಬಂಟ್ವಾಳ: ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜು ಮೊಡಂಕಾಪು ಇದರ 2023-2024 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜೋಶಲ್ ಮರೀನಾ ಪಿಂಟೊ ಅವರು 592 (98.66%) ಅಂಕ ಪಡೆದು ರಾಜ್ಯದಲ್ಲಿ ಆರನೇ ಸ್ಥಾನ ಗಳಿಸಿರುತ್ತಾರೆ. ಕಲಾ ವಿಭಾಗದಲ್ಲಿ ರೆನ್ಸನ್ ಸ್ಟಿಫನ್ ಕುಟಿನ್ಹೊ ಅವರು 581 (96.83%) ಅಂಕ ಹಾಗೂ ವಿಜ್ಞಾನ ವಿಭಾಗದಲ್ಲಿ ಉಜ್ವಲ್ ಪೈ ಅವರು 574(95.66%) ಅಂಕ ಗಳಿಸಿರುತ್ತಾರೆ.
ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.