
ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಕಳೆದ ಹದಿನೈದು ದಿನಗಳಿಂದ ರಕ್ಷಿಸಿಡಲಾಗಿದ್ದ ಶವದ ಅಂತ್ಯಸಂಸ್ಕಾರವನ್ನು ಮಲ್ಪೆ ಪೋಲಿಸ್ ಠಾಣೆಯ ಪೋಲಿಸರು, ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೇತೃತ್ವದಲ್ಲಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನಡೆಸಲಾಯಿತು.


ಮಲ್ಪೆ ಪೋಲಿಸ್ ಠಾಣೆಯ ಎ.ಎಸ್.ಐ ವಿಜಯ್ ಕೆ, ತನಿಖಾ ಸಹಾಯಕ ನಾಗರಾಜ್ ಕಾನೂನು ಪ್ರಕ್ರಿಯೆ ನಡೆಸಿದರು. ಅಂತ್ಯಸಂಸ್ಕಾರ ಪ್ರಕ್ರಿಯೆ ನಡೆಸುವಾಗ ಪ್ರದೀಪ್ ಅಜ್ಜರಕಾಡು, ಸೋನಿ ಅಜ್ಜರಕಾಡು, ಫ್ಲವರ್ ವಿಷ್ಣು ನೆರವಾದರು. ಜಿಲ್ಲಾಸ್ಪತ್ರೆ, ನಗರಸಭೆ ಸಹಕಾರ ನೀಡಿತು.
ಮಲ್ಪೆ ಸಾರ್ವಜನಿಕ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕಾಯಿಲೆಗೆ ತುತ್ತಾಗಿ ಅಸಹಾಯಕ ಸ್ಥಿತಿಯಲ್ಲಿದ್ದರು. ಆ ಸಂದರ್ಭ ರೋಗಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ರೋಗಿ ಚಿಕಿತ್ಸೆಗೆ ಸ್ಪಂದಿಸದೆ. ಮೃತಪಟ್ಟಿದ್ದರು. ಶವವನ್ನು ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು. ವಾರಸುದಾರರ ಬರುವಿಕೆಗಾಗಿ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ವಾರಸುದಾರರು ಸಂಪರ್ಕಿಸದೆ ಇರುವುದರಿಂದ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು




