![BJP candidate from Udupi-Chikkamagaluru Constituency](https://i0.wp.com/veekshakavani.com/wp-content/uploads/2024/04/BJP-candidate-from-Udupi-Chikkamagaluru-Constituency.jpg?resize=640%2C400&ssl=1)
ಉಡುಪಿ: ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡುಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೇ ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿದ್ದು, ಸೂಕ್ತ ಬೆಂಬಲ ದೊರೆಯುತ್ತಿಲ್ಲ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.
ಕೋಟ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಉಡುಪಿಗೆ ದೌಡಾಯಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷರ ಜೊತೆ ಮೂರು ಸಭೆ ನಡೆಸಿದ್ದಾರೆ. ಕೋಟ ಪರ ಪ್ರಚಾರದಲ್ಲಿ ತೊಡಗುವಂತೆ ಖಟಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.