ಬಂಟ್ವಾಳ: ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಈತ ಎ.14ರಂದು ಆದಿತ್ಯವಾರ ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಪುಷ್ಪರಾಜ್ ಎಂಬಾವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಚೂರಿ ಇರಿತದಿಂದ ಗಾಯಗೊಂಡಿದ್ದ ಪುಷ್ಪರಾಜ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಬಳಿಕ ಆರೋಪಿ ರವಿ ಮೊಬೈಲ್ ಫೋನ್ ಸ್ವಿಚ್ ಆಪ್ ಮಾಡಿ ಪರಾರಿಯಾಗಿದ್ದು, ಈತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಗಲಾಟೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿದ ಘಟನೆಗೆ ನಿಖರವಾದ ಕಾರಣ ಪೋಲಿಸ್ ತನಿಖೆಯ ಬಳಿಕ ತಿಳಿಯಬೇಕಿದೆ.