ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರ ಉಸ್ತುವಾರಿ ಹಾಗೂ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ತಾಲೂಕು ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪದ್ಮಶೇಖರ್ ಜೈನ್, ಅಶ್ವಿನ್ ಕುಮಾರ್ ರೈ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ಬಾಸ್ ಅಲಿ, ವಿನಾಯರಾಜ್, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಸಂಜೀವ ಪೂಜಾರಿ ಬಿರ್ವ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.