ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯ ಹಲವೆಡೆ ಶನಿವಾರ ಮುಂಜಾನೆ 2 ಗಂಟೆಗೂ ಅಧಿಕ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು, ವಿಪರೀತ ಸೆಕೆಯಿಂದ ತತ್ತರಿಸಿದ್ದ ಕರಾವಳಿಯ ಜನತೆಗೆ ತಂಪೆರೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆಯ ವೇಳೆ ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಇಂದು ಮುಂಜಾನೆ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಉರುಳಿಬಿದ್ದಿವೆ. ಇದರ ಪರಿಣಾಮ ರಾತ್ರಿ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ಬೆಳಗ್ಗೆವರೆಗೂ ವ್ಯತ್ಯಯವಾಗಿತ್ತು.