ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಕಾರ್ಯಕ್ರಮ

Share with

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಏ.20 ಹಾಗೂ 21 ರಂದು Artificial Intelligence & Cyber security ವಿದ್ಯಾರ್ಥಿಗಳಿಗೆ ಎರಡು ದಿನದ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.

ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳಿಗೆ ನಿಯೋ ಇನ್ನೊವೇಶನ್ಸ್ & ಸ್ಕಿಲ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್ ಕುರಿತಾಗಿ 23 ವರ್ಷಗಳ ಆರ್ಟಿಫಿಷಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್‌ಲ್ಲಿ ಅನುಭವ ಹೊಂದಿರುವ ಅಲೋಕ್ ಚಕ್ರವರ್ತಿ B.E. M.Tech., ಇವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ಬಿಗ್ ಡಾಟಾ, ಹಾಡೂಪ್, ಸ್ಟ್ರಕ್ಟರ್ ಕ್ವೆರಿ ಲ್ಯಾಗ್ರೇಜ್, RDBMS, ಮುಂತಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ 60 ವಿದ್ಯಾರ್ಥಿಗಳು, ಹಾಗೂ ಬಿ.ಸಿ.ಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *