ಉಡುಪಿ: ಕೆ. ಜಯಪ್ರಕಾಶ್ ಹೆಗ್ಡೆ ಅವರು ಖಂಡಿತವಾಗಿಯೂ ಏಕಾಂಗಿಯಲ್ಲ, ಇಡೀ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಂತು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಜೆ.ಪಿ. ಹೆಗ್ಡೆ ಪರವಾಗಿ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದು ವಿರೋಧ ಪಕ್ಷದ ಅಪಪ್ರಚಾರ ಅಷ್ಟೇ. ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸಭೆ, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವೂ ಅವರಿಗೆ ಅನಾರೋಗ್ಯ ಇದ್ದ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. ಆದರೆ, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆ ಮನೆ ಪ್ರಚಾರ ಸಹಿತ ಎಲ್ಲ ಸಭೆಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದ್ದಾರೆ ಎಂದು ತಿಳಿಸಿದರು.