ವೀಕ್ಷಕವಾಣಿ: ಅಮೆರಿಕಾದ ನ್ಯೂ ಜೆರ್ಸಿಯಿನ ಫ್ರ್ಯಾಂಕ್ಲಿನ್ ಟೌನ್‌ನಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ ಆಗಲಿದೆ. ಅಮೆರಿಕಾಕ್ಕೆ ಪ್ರವಾಸ ಮಾಡಿದ ಸ್ವಾಮೀಜಿಗಳು ದೇಗುಲದ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದಾರೆ.
ಅಮೇರಿಕದಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗಲಿದೆ. ಮಠದ ನಿರ್ಮಲಾನಂದ ಶ್ರೀಗಳು ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.
ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ ಶಿಪ್‌ನಲ್ಲಿ ಕಾಲಭೈರವೇಶ್ವರ ದೇಗುಲ ತಲೆ ಎತ್ತಲಿದ್ದು, ದೇಗುಲದ ನೀಲ ನಕ್ಷೆ ತಯಾರಿಸಲಾಗಿದೆ.
ಆದಿ ಚುಂಚನಗಿರಿ ಮಹಾಸಂಸ್ಥಾನ ಅಮೇರಿಕದ ಫ್ರ್ಯಾಂಕ್ಲಿನ್ ಟೌನ್ ನಲ್ಲಿ 20 ಎಕರೆ ಜಮೀನು ಖರೀದಿ ಮಾಡಿದೆ. ದೇಗುಲ ಕಾಮಗಾರಿ ಪರಿಶೀಲನೆಗಾಗಿಯೇ ಸ್ವಾಮೀಜಿ ಅಮೇರಿಕ ಪ್ರವಾಸ ಕೈಗೊಂಡಿದ್ದಾರೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಕಟ್ಟಡ ನಿರ್ಮಾಣದ ಉದ್ದೇಶ ಹೊಂದಿದೆ.
ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ.
ಈ ಯೋಜನೆ ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ್ದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.