ಮಂಜೇಶ್ವರ: ಕಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಮೂರು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮಂಗಳೂರಿನಿಂದ ತೃಶೂರು ಭಾಗಕ್ಕೆ ತೆರಳುತ್ತಿದ್ದ ಕಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ಗಾಯಾಳುವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಿರುದ್ದ ರಸ್ತೆಯಲ್ಲಿ ಅಮಿತ ವೇಗದಲ್ಲಿ ಬಂದು ಕಾರಿಗೆ ಡಿಕ್ಕಿಹೊಡೆದಿದೆನ್ನಲಾಗಿದೆ.
ಅಪಘಾತದಲ್ಲಿ ಕಾರು ನುಜ್ಜು ನುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರ‍್ವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರು ಗುರುವಾಯೂರು ನಿವಾಸಿಗಳೆಂದು ಹೇಳಲಾಗುತ್ತಿದೆ. ಘಟನೆ ಸ್ಥಳಕ್ಕೆ ಉಪ್ಪಳದಿಂದ ಅಗ್ನಿಶಾಮಕದಳ, ಮಂಜೇಶ್ವರ ಪೋಲೀಸರು ಹಾಗೂ ಊರವರು ಕಾರ್ಯಚರಣೆ ನಡೆಸಿದ್ದಾರೆ.