ಬೈಂದೂರು: ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

Share with

ಉಡುಪಿ: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ಸುರಿದ ಗಾಳಿಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇರ್ಷಾದ್ ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಇಂದು ಬೆಳಗ್ಗೆ ಗೇಟ್ ದಾಟಿ ಹೊರಕ್ಕೆ ಬಂದಿದ್ದು, ಈ ವೇಳೆ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಇದರ ಪರಿಣಾಮ ವಿದ್ಯುತ್ ಪ್ರವಹಿಸಿ ತೀವ್ರವಾಗಿ ಅಸ್ವಸ್ಥಗೊಂಡ ಅವರು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬೈಂದೂರು ಮೆಸ್ಕಾಂನ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *