ಬಂಟ್ವಾಳ: ರಾಜ್ಯ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿಎ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಪರವಾಗಿ ಬಂಟ್ವಾಳ ಕ್ಷೇತ್ರ ಬಿಜೆಪಿ ತಂಡವು ವಿವಿಧ ಶಾಲೆಗಳಿಗೆ ತೆರಳಿ ಮತದಾರ ಶಿಕ್ಷಕರನ್ನು ಭೇಟಿಯಾಗಿ ಮತಯಾಚನೆ ನಡೆಸಿದರು.
ದಡ್ಡಲಕಾಡು, ಅಚಾರಿಪಲ್ಕೆ, ಕೊಯಿಲ, ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆ, ಪ.ಪೂ. ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ಬಿಜೆಪಿ ಸರಕಾರವು ಶಿಕ್ಷಕರ ಪರವಾಗಿ ತೆಗೆದುಕೊಂಡ ತೀರ್ಮಾನಗಳು, ಕಳೆದ ಅವಧಿಯಲ್ಲಿ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಸಾಧನೆ, ಭೋಜೇಗೌಡ ಅವರ ಸಾಧನೆಗಳ ಕುರಿತು ತಿಳಿಸಿದರು.
ಬಂಟ್ವಾಳ ಬಿಜೆಪಿ ಕೋಶಾಧಿಕಾರಿ ಪ್ರಕಾಶ್ ಅಂಚನ್, ಚುನಾವಣಾ ಸಹಸಂಚಾಲಕ ಸುರೇಶ್ ಕೋಟ್ಯಾನ್, ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ತಾ.ಪಂ.ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಂಗಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಸಂಗಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಸುರೇಶ್, ಪ್ರಮುಖರಾದ ಪುರುಷೋತ್ತಮ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಮೊದಲಾದವರಿದ್ದರು.