ಉಡುಪಿ: ಸಿಟಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರನ್ನು ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್ (78) ಎಂದು ಗುರುತಿಸಲಾಗಿದೆ. ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿದ್ದ ಶ್ರೀ ಗಣೇಶ್ ಮೋಟಾರ್ಸ್ ಸಿಟಿ ಬಸ್ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಸಂದರ್ಭದಲ್ಲಿ ಸಂಪೂರ್ಣ ಟ್ರಾಫಿಕ್ ದಟ್ಟನೆ ಉಂಟಾಯಿತು.