ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. 26 ವರ್ಷದ ಪ್ರಿಯಾಂಕಾ ಜಾರಕಿಹೊಳಿ ಎಂಬಿಎ ಪದವೀಧರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ ಪ್ರಿಯಾಂಕಾ ಜಾರಕಿಹೊಳಿ 92,655 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ದೇಶದ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರು ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ