ಉಡುಪಿ: ದಾರಿ ತಪ್ಪಿ ಬಂದ ಜಿಂಕೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ.
ಅರಣ್ಯದಿಂದ ನೀರಿಗಾಗಿ ಹುಡುಕಾಟ ನಡೆಸುತ್ತಾ ಬಂದಿದ್ದ ಜಿಂಕೆ ಆವರಣವಿಲ್ಲದ 25 ಅಡಿ ಆಳದ ಬಾವಿಗೆ ಬಿದ್ದಿದೆ. ಜಿಂಕೆಯ ಚೀರಾಟ ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಲೆಯ ಸಹಾಯದಿಂದ ಜಿಂಕೆಯನ್ನು ಮೇಲಕ್ಕೆತ್ತಿ ಕಾಡಿಗೆ ಬಿಟ್ಟಿದ್ದಾರೆ. ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದ ಕಾರಣ ಜಿಂಕೆ ಪ್ರಾಣಾಪಾಯದಿಂದ ಪಾರಾಗಿದೆ.