ಮಲ್ಪೆ, ಕಾಪು ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ತಡೆಬೇಲಿ ನಿರ್ಮಾಣ

Share with

ಉಡುಪಿ: ಕಳೆದ ಕೆಲವು ದಿನಗಳಿಂದ ಕರಾವಳಿಯಾದ್ಯಂತ ಉತ್ತಮ ಮಳೆಯಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಗಾಳೆಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮಲ್ಪೆ ಹಾಗೂ ಕಾಪು ಬೀಚ್ ನಲ್ಲಿ ಕೆಲವೊಂದು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಮಲ್ಪೆ ಹಾಗೂ ಕಾಪು ಬೀಚ್‌ನಲ್ಲಿ ಯಾವುದೇ ಅಪಾಯ ಸಂಭವಿಸದಂತೆ ಸುಮಾರು ಒಂದು ಕಿಲೋ ಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದಲ್ಲಿ ಬಲೆಯನ್ನು ಅಳವಡಿಸಿ ತಡೆಬೇಲಿಯನ್ನು ನಿರ್ಮಿಸಲಾಗಿದೆ. ಸಮುದ್ರ ಪ್ರಕ್ಷುಬ್ಧ ಆಗಿರುವಾಗ ಪ್ರವಾಸಿಗರಿಗೆ ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.
ಅದೇ ರೀತಿ ಪ್ರವಾಸಿಗರ ಸುರಕ್ಷತೆ ದೃಷ್ಠಿಯಿಂದ ಮಲ್ಪೆ ಬೀಚ್ ಹೆಚ್ಚಿನ ಕಡೆಗಳಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಲಾಗಿದೆ. ‘ಅಪಾಯ’, ‘ಪ್ರವೇಶವಿಲ್ಲ’ ಎಂಬ ಎಚ್ಚರಿಕೆಯ ಚಿಹ್ನೆಯೊಂದಿಗೆ ಬೀಚ್ ಪ್ರದೇಶದಾದ್ಯಂತ 40 ಕೆಂಪು ಧ್ವಜಗಳನ್ನು ಹಾರಿಸಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಹಾಗೆ, ಮಲ್ಪೆ ಬೀಚ್‌ನಲ್ಲಿರುವ ತರಬೇತಿ ಪಡೆದ ಜೀವರಕ್ಷಕರು ಪ್ರವಾಸಿಗರ ಸುರಕ್ಷತೆಗೆ ಕಾರ್ಯಪ್ರವೃತ್ತರಾಗಿದ್ದಾರೆ.


Share with

Leave a Reply

Your email address will not be published. Required fields are marked *