ನವದೆಹಲಿ : ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.