ಉಡುಪಿ: ಚಾಂತಾರು ಗ್ರಾಮದ ಜನರ ಬಹುದಿನದ ಬೇಡಿಕೆಗೆ ಸ್ಪಂದಿಸಿ 12 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಅಗ್ರಹಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುದ್ದಲಿ ಪೂಜೆ ನೆರವೇರಿಸಿ, ಅತೀ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಗ್ರಾಮದ ಸಮಗ್ರ ಅಭಿವೃದ್ದಿಗೆ ಶಾಸಕನ ನೆಲೆಯಲ್ಲಿ ಸಹಕಾರದ ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮಾ ಶೆಟ್ಟಿ, ಉಪಾಧ್ಯಕ್ಷರಾದ ಶೋಭಾ ಪೂಜಾರಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಜೀವ್ ಕುಲಾಲ್, ವಾರ್ಡ್ ಸದಸ್ಯರಾದ ದಿನೇಶ್, ವಸಂತಿ, ದಿವ್ಯ ಅಲ್ಮೆಡಾ, ಪಕ್ಷದ ಮುಖಂಡರಾದ ಬಿ. ಎನ್. ಶಂಕರ ಪೂಜಾರಿ, ನಿಶನ್ ರೈ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.