ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದ “ಉದ್ದಜಿಗಿತದಲ್ಲಿ” ಭಾಗವಹಿ ಪ್ರಥಮ ಸ್ಥಾನ ಪಡೆದು ಚೆನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಚರಣ್ ಎನ್ ರವರ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ, ಸಹಪಾಠಿಗಳು, ವಿದ್ಯಾರ್ಥಿಯ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.