ಉಡುಪಿ: ಮನೆಯಲ್ಲಿ ಚಾರ್ಜಿಗೆ ಇರಿಸಿದ್ದ ಎಲೆಕ್ಟ್ರಿಕಲ್ ಬೈಕಿನ ಬ್ಯಾಟರಿ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರ ಸಮೀಪ ನಡೆದಿದೆ. ಇಲ್ಲಿನ ಬಾಡಿಗೆ ರೂಮಿನಲ್ಲಿ ಇರುವ ವ್ಯಕ್ತಿಯೊಬ್ಬರು ಎಲೆಕ್ಟ್ರಿಕಲ್ ಬೈಕಿನ ಬ್ಯಾಟರಿ ಮನೆ ಒಳಗೆ ಚಾರ್ಜಿಗೆ ಇಟ್ಟಿದ್ದರು. ಈ ಬ್ಯಾಟರಿ ಅರ್ಧ ಗಂಟೆ ಸಮಯದಲ್ಲಿ ಸ್ಪೋಟ ಆಗಿದ್ದು ಮನೆಯಲ್ಲಿ ಆ ಸಮಯದಲ್ಲಿ ಮನೆ ಒಳಗೆ ಯಾರು ಇಲ್ಲದೆ ಇದ್ದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ .ಬಟ್ಟೆ ಮತ್ತು ಬ್ಯಾಟರಿ ಹಾಗೂ ದಿನ ಬಳಕೆಯ ಹಲವಾರು ವಸ್ತುಗಳು ಸುಟ್ಟು ಹೋಗಿದೆ. ಬ್ಯಾಟರಿ ಸ್ಪೋಟಗೊಂಡ ಈ ಪ್ರಕರಣ ಮನೆಯವರ ಆತಂಕಕ್ಕೆ ಕಾರಣವಾಗಿದೆ.