ವಿಟ್ಲ : ಬಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿದ ಘಟನೆ ವಿಟ್ಲ ಕನ್ಯಾನ ಸಮೀಪ ನಡೆದಿದೆ.
ಕನ್ಯಾನ ಸಮೀಪ ಪಿಕಪ್ ವಾಹನದಲ್ಲಿ ಹೋರಿಯೊಂದನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಕಾರ್ಯಾಚರಣೆ ನಡೆಸಿದ ಬಜರಂಗದಳ ಕಾರ್ಯಕರ್ತರು ವಾಹನ ಸಹಿತ ಮೂವರನ್ನು ಠಾಣೆಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.