ಭೀಕರ ರಸ್ತೆ ಅಪಘಾತ; 13 ಜನರು ಸಾವು

Share with

ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಪರಶುರಾಮ್ ( 45 ), ಭಾಗ್ಯ (40), 2 (50) ໖ (50), ಸುಭದ್ರಾ ಭಾಯಿ( 65), ಪುಣ್ಯ( 50), ಮಂಜುಳಾ ಭಾಯಿ 57), ಆದರ್ಶ್( 23) ಡ್ರೈವರ್, ಮಾನಸಾ( 24), ರೂಪಾ( 40), ಮಂಜುಳಾ( 50), (4 ವರ್ಷ ಹಾಗೂ 6 ವರ್ಷದ ಮಕ್ಕಳು( ಹೆಸರು ತಿಳಿದು ಬರಬೇಕಿದೆ) ಮೃತಪಟ್ಟಿದ್ದಾರೆ.

ಗಾಯಾಳುಗಳಾದ ಅರ್ಪಿತಾ(18) ಸೇರಿದಂತೆ ಇನ್ನೂ ಮೂವರು ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಭದ್ರಾವತಿಗೆ ಮರಳಿ ಹೋಗುತ್ತಿರುವಾಗ ತಡರಾತ್ರಿ 3.30ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಟಿಟಿ ವಾಹನ ನುಜ್ಜು ಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತಗೆದು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.


Share with

Leave a Reply

Your email address will not be published. Required fields are marked *