
ಜಾರ್ಜ್ಟೌನ್ (ಗಯಾನ): ಮಳೆಯಿಂದಾಗಿ ವಿಳಂಬವಾದ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 68 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. ಜೂನ್ 29 ರಂದು ಬಾರ್ಬಡೋಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಫೀಲ್ಡಿಂಗ್ ನಡೆಸಲು ನಿರ್ಧರಿಸಿತು. ನಾಯಕ ರೋಹಿತ್ ಶರ್ಮ ಮತ್ತು ಸೂರ್ಯ ಕುಮಾರ್ ಯಾದವ್ ಅವರ ಉಪಯುಕ್ತ ಬ್ಯಾಟಿಂಗ್ನಿಂದಾಗಿ 7 ವಿಕೆಟಿಗೆ 171 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ನಲುಗಿ 16.4 ಓವರ್ ಗಳಿಗೆ 103 ರನ್ ಗಳಿಗೆ ಸರ್ವ ಪತನ ಕಂಡು ಸೋಲಿಗೆ ಶರಣಾಯಿತು.




