ಭಾರತ ಟಿ20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಅಭಿಮಾನಿಗಳಿಗೆ ಶಾಕ್ ನೀಡಿದ ಕೊಹ್ಲಿ

Share with

ಟೀಮ್ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್
ಗೆದ್ದ ಸಾಧನೆ ಮಾಡಿದೆ. ಬಾರ್ಬಡೋಸ್‌ನಲ್ಲಿ ನಡೆದ
ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು.

ಭಾರತ ಆದರೆ ಗೆಲುವಿನ ಖುಷಿಯಲ್ಲಿ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಒಂದು ಕಡೆ ಭಾರತ ವಿಶ್ವ ಕಪ್ ಕ್ರಿಕೆಟ್ ಗೆದ್ದ ಖುಷಿಯಲ್ಲಿದ್ದರೆ ಇನ್ನೊಂದೆಡೆ ಕೊಹ್ಲಿ ಅಭಿಮಾನಿಗಳು ಬೇಸರದಲ್ಲಿದ್ದಾರೆ.


Share with

Leave a Reply

Your email address will not be published. Required fields are marked *