ಕಾಸರಗೋಡು:ಪುರುಷ ಮತ್ತು ಮಹಿಳೆಯ ಮೃತದೇಹ ವಸತಿಗೃಹದಲ್ಲಿ ಪತ್ತೆ..!

Share with

ಕಾಸರಗೋಡು: ಪುರುಷ ಮತ್ತು ಮಹಿಳೆಯ ಮೃತದೇಹ ಕಾಸರಗೋಡು ನಗರದ ವಸತಿಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ನೆಲ್ಲಿಕಟ್ಟೆಯ ಫಾತಿಮಾ (42) ಹಾಗೂ ಚೆಂಗಳ ರಹಮತ್ ನಗರದ ಕೆ. ಹುಸೈನಾರ್ (33) ಮೃಪಟ್ಟವರಾಗಿದ್ದಾರೆ. ಮಹಿಳೆಯನ್ನು ಕೊಲೆಗೈದು ಆತ ಆತ್ಮಹತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ.

ಕಾಸರಗೋಡು ಹಾಗೂ ಹೊಸದುರ್ಗ ಠಾಣಾ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗರದಲ್ಲಿರಿಸಲಾಗಿದೆ.

ಫಾತಿಮಾಳು ಪತಿ ಮತ್ತು ಮಕ್ಕಳನ್ನು ತೊರೆದು ಕಳೆದ ನಾಲ್ಕು ವರ್ಷಗಳಿಂದ ಹುಸೈನಾರ್ ಜತೆ ವಾಸವಾಗಿದ್ದಳು ಎಂದು ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *