
ಕುಲ್ಗಾಮ್: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಕುಲ್ಗಾಮ್ ನ ಮೊಡರ್ಗಾಮ್ ಗ್ರಾಮದಲ್ಲಿ ಶಂಕಿತ ಉಗ್ರರು ಅಡಗಿರುವ ಬಗ್ಗೆ ನಿಖರ ಮಾಹಿತಿ ಪಡೆದ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಓರ್ವ ಯೋಧ ಅಸುನೀಗಿದ್ದಾರೆ.
ಪಡೆಗಳು ಹಳ್ಳಿಯಲ್ಲಿ ಇಳಿಯುತ್ತಿದ್ದಂತೆ ಪರಿಸ್ಥಿತಿ ತ್ವರಿತವಾಗಿ ಉಲ್ಬಣಗೊಂಡಿತು. ಉಗ್ರರನ್ನು ಬಲೆಗೆ ಬೀಳಿಸಲು ತ್ವರಿತವಾಗಿ ಸುತ್ತುವರಿಯಲಾಯಿತು. ಆರಂಭಿಕ ಗುಂಡಿನ ದಾಳಿಯಲ್ಲಿ ಒಬ್ಬ ಯೋಧನಿಗೆ ಗಾಯಗಳಾಗಿವೆ.
ಕುಲ್ಗಾಮ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಮತ್ತು ಅಡಗಿಕೊಂಡಿದ್ದ ಭಯೋತ್ಪಾದಕರ ನಡುವಿನ ಎನ್ ಕೌಂಟರ್ ನಲ್ಲಿ ಗಾಯಗೊಂಡ ಸೇನಾ ಯೋಧ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




