
ನಟ ದರ್ಶನ್ ಜೈಲಿನಲ್ಲಿದ್ದರೂ ಅವರಿಗೆ ತಮ್ಮ ಅಭಿಮಾನಿಗಳ ಮೇಲಿನ ಪ್ರೀತಿ ಸ್ವಲ್ಪವೂ ಕಡಿಮೆಯಾಗಿಲ್ಲ ಎಂದು ದರ್ಶನ್ ಪರ ವಕೀಲ ನಾರಾಯಣಸ್ವಾಮಿ ತಿಳಿಸಿದ್ದಾರೆ.

ದರ್ಶನ್ & ಪವಿತ್ರಾ ಗೌಡ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಜಾಮೀನು ಪ್ರಕ್ರಿಯೆ ಬಗ್ಗೆ ಮಾತನಾಡಿದ್ದಾಗಿ ಮಾಹಿತಿ ನೀಡಿದ್ದಾರೆ.
‘ಆ ವೇಳೆ ದರ್ಶನ್ ಫ್ಯಾನ್ಸ್ ಬಗ್ಗೆ ವಿಚಾರಿಸುವುದನ್ನು ಮರೆತಿಲ್ಲ. ಅಭಿಮಾನಿಗಳು ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಅಂತ ಅವರು ಮನವಿ ಮಾಡಿದ್ದಾರೆ’ ಎಂದು ವಕೀಲರು ತಿಳಿಸಿದ್ದಾರೆ.




