ಬಂಟ್ವಾಳ : ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸರಕಾರಿ ಶಾಲೆಗಳ ಹಸಿರು, ಹಾಗೂ ನೈರ್ಮಲತೆ ಯನ್ನು ಗುರುತಿಸಿ ಕೊಡಮಾಡುವಂತಹ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024 ಗೆ ಬಂಟ್ವಾಳ ತಾಲೂಕಿನ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಆಯ್ಕೆಯಾಗಿದೆ. ಸರಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವಚ್ಛತೆ ಮತ್ತು ಸುಸ್ಥಿರತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಶಾಲೆಗಳನ್ನು ಆಯ್ಕೆ ಮಾಡಿ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾಗಲು 22 ಮಾನದಂಡಗಳಿದ್ದು, ಟ್ರಸ್ಟ್ನ ತಂಡ ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆಯ ಬಳಿಕ ಪ್ರಶಸ್ತಿಗಳಿಗೆ ಆಯ್ಕೆ ನಡೆಯುತ್ತದೆ. ಈ ನಿಟ್ಟಿನಲ್ಲಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಆಯ್ಕೆಯಾಗಿದೆ. ದಿನಾಂಕ 27-07-2024 ರಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು