ಕಾರ್ಕಳ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜು.18 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.