ವಿಟ್ಲ:ಗಾಳಿಮಳೆಗೆ  ಕೋಳಿ ಸಾಕಾಣಿಕಾ ಶೆಡ್ ಧರಾಶಾಯಿ:  1500 ಕೋಳಿಗಳು ದುರ್ಮರಣ

Share with

ವಿಟ್ಲ: ಎಡೆಬಿಡದೆ ಬಂದ ಗಾಳಿಮಳೆಗೆ  ಕೋಳಿ ಸಾಕಾಣಿಕಾ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಜು.18ರ ತಡರಾತ್ರಿ ನಡೆದಿದೆ.

ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಎಂಬವರ ಮಾಲಕತ್ವದ ಕೋಳಿ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು. ಕೋಳಿಗಳು ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಸುಮಾರು 700 ಕೋಳಿಗಳು ಮಾರಾಟವಾಗಿದ್ದವು. ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತು ಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆನ್ನಲಾಗಿದೆ.


Share with

Leave a Reply

Your email address will not be published. Required fields are marked *