ಕಾಸರಗೋಡು ಜು. 18: ಬಾಲಗೋಕುಲ ಕಾಸರಗೋಡು ಇದರ 44 ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಬಾಲದಿನಾಚರಣೆ ಸಮಿತಿ ಅಧ್ಯಕ್ಷರಾದ ಅಡ್ವಕೇಟ್ ಸುರೇಶ್ ಅವರು ಬಾಲಗೋಕುಲ ಜಿಲ್ಲಾ ಕಾರ್ಯದರ್ಶಿ ಶ್ರೀ ಜಯರಾಮ್ ಶೆಟ್ಟಿ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಷ್ಟಮಿ ಸ್ಥಿರ ಸಮಿತಿಯ ಸಂಚಾಲಕರಾದ ಶ್ರೀ ಕೆ.ಎನ್.ರಾಮಕೃಷ್ಣ ಹೊಳ್ಳ, ಹಿರಿಯ ಉಪಾಧ್ಯಕ್ಷರಾದ ಶ್ರೀ ಗುಣಪಾಲ, ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.