ಶಿರೂರು ಗುಡ್ಡ ಕುಸಿತದ ಅಸಲಿ ಕಾರಣ ಬಯಲು!

Share with

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ ಉಂಟಾಗಿರುವುದು ಭೂವೈಜ್ಞಾನಿಕ ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಕಾಮಗಾರಿಯಿಂದ ನೈಸರ್ಗಿಕ ಒಳಚರಂಡಿ ಹರಿವಿಗೆ ತೊಂದರೆಯಾಗಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಇಳಿಜಾರು ಪ್ರದೇಶ ಮತ್ತು ಎಡ ಪಾರ್ಶ್ವವು ರಚನಾತ್ಮಕವಾಗಿ ವಿರೂಪಗೊಂಡಿದೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ಗಮನಿಸಲಾಗಿದೆ ಎಂದು ಹೇಳಲಾಗುತ್ತದೆ. ಆದರೆ, ಪ್ರಕೃತಿ ವಿಕೋಪದಿಂದ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share with