ಚಾರ್ಮಾಡಿ ಘಾಟಿಯಲ್ಲಿ ಭಾರೀ ಗುಡ್ಡ ಕುಸಿತ

Share with

ರಾಷ್ಟ್ರೀಯ ಹೆದ್ದಾರಿ 173ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್‌ ಆಗಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಲಾಗಿದೆ.


Share with