ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಈಗಾಗಲೇ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಾರು ಮಲಪ್ಪುರಂನ ಮಂಜೇರಿ ಬಳಿ ಅಪಘಾತಕ್ಕೀಡಾಗಿದ್ದು, ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಭೂಕುಸಿತ ಪೀಡಿತ ವಯನಾಡಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸದ್ಯ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪೊಲೀಸರು ತಿಳಿಸಿದ್ದಾರೆ.