ಪತಿ ಬೈದಿದ್ದಕ್ಕೆ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪತ್ನಿ ..!

Share with

ಇಂದೋರ್: ಪತಿ ಮತ್ತು ಪತ್ನಿಯ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದು ನೊಂದ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ನೊಂದ 27 ವರ್ಷದ ಮಹಿಳೆ ತಾನು ವಾಸವಿದ್ದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ್ ಟೌನ್‍ಶಿಪ್‌ನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಹಿಳೆ ಯಾವುದೇ ಭಯವಿಲ್ಲದೆ ಮಹಡಿಯಿಂದ ಜಿಗಿಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದ್ದು, ಈ ವಿಡಿಯೋ ವೈರಲ್ ಆಗಿದೆ.

ಈ ವೈರಲ್ ಕ್ಲಿಪ್‍ನಲ್ಲಿ ಸೀರೆ ಉಟ್ಟ ಮಹಿಳೆ ಟೆರೇಸ್‍ನ ಅಂಚಿನಲ್ಲಿ ನಿಂತಿದ್ದಾಳೆ. ಆದರೆ ಒಬ್ಬ ವ್ಯಕ್ತಿ ಹಿಂದಿನಿಂದ ಬಂದು ಅವಳನ್ನು ತಡೆಯಲು ಪ್ರಯತ್ನಿಸುತ್ತಾನೆ. ಮಹಿಳೆ, ಅವನ ಮಾತನ್ನು ಕೇಳದೆ, ಮೂರನೇ ಮಹಡಿಯಿಂದ ಜಿಗಿದಳು. ಪತಿಯೊಂದಿಗೆ ಜಗಳವಾಡಿದ ನಂತರ ಅವಳು ಈ ನಿರ್ಧಾರವನ್ನು ತೆಗೆದುಕೊಂಡಳು ಎನ್ನಲಾಗಿದೆ.

ಮೃತರನ್ನು ಇಡಬ್ಲ್ಯೂಎಸ್ ಕ್ವಾರ್ಟರ್ಸ್ ನಿವಾಸಿ ಅಂಗೂರಿ ಬಾಯಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಸಾಗರ ಮೂಲದವರಾಗಿದ್ದು, ಆಕೆಯ ಪತಿ ರಾಹುಲ್ ಲೋಧಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *