ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕನದ್ದು ಎಂಬ ಶಂಕೆ

Share with

ಉತ್ತರ ಕನ್ನಡ, ಆಗಸ್ಟ್​​ 07: ಅಂಕೋಲಾ (Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು 11 ಜನ ಮೃತಪಟ್ಟಿದ್ದಾರೆ. ಎಂಟು ಮಂದಿ ಮೃತದೇಹ ಪತ್ತೆಯಾಗಿದ್ದು, ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಶಿರೂರು ಗುಡ್ಡ ಕುಸಿತದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಅಂತ ಇನ್ನೂ ದೃಢವಾಗಿಲ್ಲ.

ಮೃತದೇಹವು ಗುಡ್ಡ ಕುಸಿತದಲ್ಲಿ ಮೃತಪಟ್ಟದವರದ್ದೇ ಅಥವಾ ಅಲ್ಲವೇ ಎಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ.

ಜುಲೈ 16 ರಂದು ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ ಕೇರಳದ ಕೋಝಿಕ್ಕೋಡ್ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಅರ್ಜುನ್​ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಮೇರೆಗೆ ಹುಡುಕಾಟ ನಡೆಸಲಾಗಿತ್ತು. ಸತತ 13 ದಿನಗಳ ಕಾಲ ಹುಡುಕಾಟ ನಡೆಸಿದರೂ ಅರ್ಜುನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.


Share with

Leave a Reply

Your email address will not be published. Required fields are marked *