ದುರಂತ ಸ್ಥಳಗಳನ್ನು ಕಂಡು ಸಂಕಷ್ಟ ಆಲಿಸಿದ ಪ್ರಧಾನಿ ಮೋದಿ

Share with

ವಯನಾಡ್:  ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆಗಸ್ಟ್ 10)  ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಭಾಗಿಯಾಗಿದ್ದರು.

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ”ಭೀಕರ ಪ್ರಕೃತಿ ವಿಕೋಪ ನಡೆದ ದಿನ ಬೆಳಗ್ಗೆ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೆ. ನೆರವು ನೀಡುವುದಾಗಿ, ಆದಷ್ಟು ಬೇಗ ಸ್ಥಳಕ್ಕೆ ತಲುಪಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ಪೊಲೀಸರು, ವೈದ್ಯರು ಎಲ್ಲರೂ ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸಿದರು, ನಾವೆಲ್ಲರೂ ಅವರೊಂದಿಗೆ ನಿಂತಿದ್ದು, ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜತೆ ನಿಂತಿದೆ ಮತ್ತು ಹಣದ ಕೊರತೆಯಿಂದ ಯಾವುದೇ ಕೆಲಸಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.


Share with

Leave a Reply

Your email address will not be published. Required fields are marked *