ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶ್ಯಾಮಲ ಬುಲ್ ಬುಲ್ ದಳ ಉದ್ಘಾಟನಾ ಕಾರ್ಯಕ್ರಮ ಜರಗಿತು.
ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಧ್ವಜಾರೋಹಣ ನೆರವೇರಿಸಿ, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿಯಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳು,ಊರಿನ ಗಣ್ಯರು,ಪೋಷಕರು ಸಕ್ರಿಯವಾಗಿ ಪಾಲ್ಗೊಂಡು ಸರ್ಕಾರಿ ಶಾಲೆಯ ಉಳಿವಿಗಾಗಿ ಪ್ರಯತ್ನಿಸಬೇಕು,ಶಾಲೆಯಲ್ಲಿ ಭಾರತ ಸೇವಾದಳ, ಬುಲ್ ಬುಲ್ ಚಟುವಟಿಕೆಗಳು ಮಕ್ಕಳಿಗೆ ಪ್ರಾಥಮಿಕ ಹಂತ ದಲ್ಲಿಯೇ ಸೇವೆಯ ಗುಣವನ್ನು ರೂಢಿಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಬುಲ್ ಬುಲ್ ದಳ ಸ್ಥಾಪನೆಗೆ ಸಹಕರಿಸಿದ ದಾನಿಗಳನ್ನು ಹಾಗೂ ಕಳೆದ ವರ್ಷ ಶಾಲಾ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸಹಕರಿಸಿದ ಸಹೃದಯಿ ವಿದ್ಯಾಭಿಮಾನಿಗಳನ್ನು ಗೌರವಿಸಲಾಯಿತು. ಮಕ್ಕಳಿಗೆ ಅಮೇರಿಕಾದ ದಾನಿಯೊಬ್ಬರು ಕೊಡುಗೆಯಾಗಿ ನೀಡಲಾದ ಟೀ ಶರ್ಟ್ ಹಾಗೂ ಪ್ಯಾಂಟನ್ನು ವಿತರಿಸಲಾಯಿತು.
ಮಕ್ಕಳು ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು ಭಾಷಣ ಮಾಡಿದ ಮಕ್ಕಳಿಗೆ ಶಾಲಾ ವಿದ್ಯಾಭಿಮಾನಿಯಾದ ಗಿರೀಶ್ ಎಂ. ಬೋಳಂಗಡಿ ಅವರು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಜನಾರ್ಧನ್ ಕುಲಾಲ್, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಂಡಾಲ ವಿನೋದ್ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷರು, ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು,ಪೋಷಕರು ನೀಡಿದಂತಹ ಸಿಹಿ ತಿಂಡಿ ವಿತರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪ್ರಸ್ತಾವಿಕ ಮಾಡಿ, ಶಿಕ್ಷಕಿ ಭವ್ಯ ವಂದಿಸಿ,ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಕಿಶೋರಿ ಸಹಕರಿಸಿದರು.