ಉಪ್ಪಳ: ಭಾರತೀಯ ಜನತಾ ಪಕ್ಷ ಕುಂಬಳೆ ಮಂಡಲ ಸಮಿತಿಯ ಆಶ್ರಯದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವನ್ನು ಆಚರಿಸಲಾಯಿತು, ಮಂಡಲ ಅಧ್ಯಕ್ಷರಾದ ಸುನಿಲ್ ಅನಂತಪುರ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ವನ್ನು ನಡೆಸಲಾಯಿತು, ಸ್ವಾತಂತ್ರ್ಯದ ಬಗ್ಗೆ ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯರಾದ ವಿ ರವೀಂದ್ರನ್ ರವರು ವಿವರಿಸಿದರು .ಕಾರ್ಯಕ್ರಮ ದಲ್ಲಿ ಮಹಿಳಾ ಮೋರ್ಚಾ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ರಚನಾ, ಬಿಜೆಪಿ ಜಿಲ್ಲಾಸಮಿತಿ ಸದಸ್ಯ ,ಕುಂಬ್ಳೆ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ರಾಧಾಕೃಷ್ಣ ರೈಮುಂತಾದವರು ಉಪಸ್ಥಿತರಿದ್ದರು ,ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಕೆ ಪಿ ಸ್ವಾಗತಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ವಂದಿಸಿದರು