
ಅಸ್ಸಾಂನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿ ಸಾವನ್ನಪ್ಪಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆರೋಪಿ ಕೆರೆಗೆ ಹಾರಿ ಮೃತಪಟ್ಟಿದ್ದಾನೆ. ಸ್ಥಳದ ಪರಿಶೀಲನೆಯ ಭಾಗವಾಗಿ, ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆತಂದಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕೊಳಕ್ಕೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಹುಡುಕಾಟ ಆರಂಭಿಸಿದ ಪೊಲೀಸರು, 2 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.





