
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ 7 ಜಿಲ್ಲೆಗಳಿಗೆ ‘ಆರೆಂಜ್’ & 4 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20ಸೆಂ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ & ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ ಮತ್ತು ದ. ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.





